ಗೃಹಲಕ್ಷ್ಮಿ ಹಣದಲ್ಲಿ ಗ್ರಂಥಾಲಯ ತೆರೆದ ಮಹಿಳೆ…!!

0
15

ಬೆಳಗಾವಿ ಜಿಲ್ಲೆಯ ರಾಯಭಾಗ ತಾಲೂಕಿನ ಮಂಟೂರ ಗ್ರಾಮದ ಮಹಿಳೆ ಮಲ್ಲವ್ವ ಭೀಮಪ್ಪ ಮೇಟಿ ಅವರು ಗ್ರಾಮ ಪಂಚಾಯತ ಸದಸ್ಯರಾಗಿದ್ದು ಮಕ್ಕಳ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅನುಕೂಲವಾಗಲೆಂದು ತಮ್ಮ ಹದಿಮೂರು ಕಂತಿನ ಗೃಹಲಕ್ಷ್ಮೀ ಹಣ ಹಾಗೂ ಪಂಚಾಯ್ತಿ ಸದಸ್ಯತ್ವದ ಗೌರವಧನವನ್ನು ಸೇರಿಸಿ ಮಕ್ಕಳ ಸಹಕಾರದಿಂದ ಒಂದು ಲಕ್ಷ ಐವತ್ತು ಸಾವಿರ ರೂ ಖರ್ಚು ಮಾಡಿ ಸಣ್ಣ ಪ್ರಮಾಣದ ಗ್ರಂಥಾಲಯವನ್ನು ನಿರ್ಮಿಸಿ ಮಾದರಿಯಾಗಿದ್ದಾರೆ.